ಹೈಕಮಾಂಡ್ ಸೂಚಿಸಿದರೆ ಪಕ್ಷದ ಕಚೇರಿಯಲ್ಲಿ ಕಸ ಗುಡಿಸಲು ಸಿದ್ಧ – ಶಾಸಕ ರಾಜುಗೌಡ

ಯಾದಗಿರಿ:ಹೈಕಮಾಂಡ್ ಸೂಚಿಸಿದರೆ ಪಕ್ಷದ ಕಚೇರಿಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಮಂತ್ರಿ ಸ್ಥಾನ ಸಿಗದಿರುವುದಕ್ಕೆ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸುರಪುರ ಶಾಸಕ ರಾಜುಗೌಡ ಹೇಳಿದ್ದಾರೆ.

ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಆನಂದ್‌ ಸಿಂಗ್‌ ಅವರು ಅಭಿ ಪಿಚ್ಚರ್‌ ಬಾಕಿ ಹೈ ಎಂದು ಹೇಳಿರುವುದಕ್ಕೆ ಯಾವುದೇ ವಿಶೇಷ ಅರ್ಥವಿಲ್ಲ. ಖಾತೆ ಹಂಚಿಕೆಯಲ್ಲಿ ಸಚಿವರಿಗೆ ಯಾವುದೇ ಅಸಮಾಧಾನವಿಲ್ಲ. ನನಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಬೇಸರವಿಲ್ಲ ಎಂದರು.

ಪ್ರಸ್ತುತ ಪಕ್ಷ ನೀಡಿರುವ ಸ್ಥಾನಮಾನದಿಂದ ನಾನು ತೃಪ್ತನಾಗಿದ್ದೇನೆ. ರಾಜ್ಯದ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲವನ್ನು ನೀಡುತ್ತೇನೆ. ಹೈಕಮಾಂಡ್ ಸೂಚಿಸಿದರೆ ಪಕ್ಷದ ಕಚೇರಿಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು ಹೇಳಿದರು.

Latest Indian news

Popular Stories