ಮುಂಬೈ: ಹೊಸ ವರ್ಷದ ಆರಂಭದಲ್ಲಿ ತೈಲ ಸಂಸ್ಥೆಗಳು ಬಳಕೆದಾರರಿಗೆ ಶಾಕ್ ನೀಡಿವೆ . ಎಲ್ ಪಿ ಜಿ ದರದಲ್ಲಿ 25 ರೂಪಾಯಿ ಹೆಚ್ಚಳ ಮಾಡಲಾಗಿದೆ. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಹೆಚ್ಚಳವಾಗಿದೆ.
ಹೋಟೆಲ್ ಗಳಲ್ಲಿ ಮತ್ತು ಇತರ ವಾಣಿಜ್ಯ ಚಟುವಟಿಕೆ ಕೇಂದ್ರಗಳಲ್ಲಿ ಇದನ್ನು ಬಳಸಲಾಗುತ್ತಿದೆ. ಹೋಟೆಲ್ ಮಾಲೀಕರು ಇದರ ಹೊರೆಯನ್ನು ಗ್ರಾಹಕರ ಮೇಲೆ ಹೊರಿಸಿದರೆ ಅಚ್ಚರಿಯಿಲ್ಲ.
ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಥಾಸ್ಥಿತಿ ಕಾಪಾಡಲಾಗಿದೆ.