ಅಧಿವೇಶನ ಆರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಶಾಸಕರು ಪ್ರಮಾಣ ವಚನ ಸ್ವೀಕಾರ


ಬೆಂಗಳೂರು: 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಆರಂಭವಾಗಿದೆ. ಸದನವನ್ನು ಉದ್ದೇಶಿಸಿ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರು ಮಾತನಾಡಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ನೂತನ ಶಾಸಕರಿಂದ ಪ್ರಮಾಣವಚನ ಸ್ವೀಕಾರ ಪ್ರಕ್ರಿಯೆ ಆರಂಭವಾಗಿದೆ. ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸಿದ್ದರಾಮಯ್ಯ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಸಿದ್ದಾರೆ. ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕೊರಟಗೆರೆ ಕ್ಷೇತ್ರದ ಶಾಸಕರಾಗಿ ಡಾ.ಜಿ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ದೇವನಹಳ್ಳಿ ಶಾಸಕರಾಗಿ K.H​.ಮುನಿಯಪ್ಪ,  ಸರ್ವಜ್ಞನಗರ ಕ್ಷೇತ್ರದ ಶಾಸಕರಾಗಿ ಕೆ.ಜೆ.ಜಾರ್ಜ್, ಬಬಲೇಶ್ವರ ಕ್ಷೇತ್ರದ ಶಾಸಕರಾಗಿ ಎಂ.ಬಿ.ಪಾಟೀಲ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಯಮಕನಮರಡಿ ಶಾಸಕರಾಗಿ ಸತೀಶ್​ ಜಾರಕಿಹೊಳಿ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಚಿತ್ತಾಪುರ ಶಾಸಕರಾಗಿ ಪ್ರಿಯಾಂಕ್ ಖರ್ಗೆ, ಬಿಟಿಎಂ ಲೇಔಟ್​ ಶಾಸಕರಾಗಿ ರಾಮಲಿಂಗಾರೆಡ್ಡಿ, ಮಂಗಳೂರು ಶಾಸಕರಾಗಿ ಯು.ಟಿ.ಖಾದರ್​  ಸಂವಿಧಾನದ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

Latest Indian news

Popular Stories