ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ರಾಹುಲ್ ಗೆ ಜಾರ್ಖಂಡ್ ಹೈಕೋರ್ಟ್ ರಿಲೀಫ್

ರಾಂಚಿ: 2019ರ ಲೋಕಸಭಾ ಚುನಾವಣೆ ವೇಳೆಯಲ್ಲಿ ಜಾರ್ಖಂಡ್ ನ ಚೈಬಾಸಾದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪಕ್ಕಾಗಿ ಕೆಳ ನ್ಯಾಯಾಲಯವೊಂದು ಹೊರಡಿಸಿದ್ದ ವಾರೆಂಟ್ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಜಾರ್ಖಂಡ್ ಹೈಕೋರ್ಟ್ ಗುರುವಾರ ರಿಲೀಫ್ ನೀಡಿದೆ.

ಈ ಸಂಬಂಧ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ದ್ವಿವೇದಿ ರಾಹುಲ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮಕ್ಕೆ ತಡೆಯಾಜ್ಞೆ ನೀಡಿದರು. ಈ ತೀರ್ಪಿನೊಂದಿಗೆ ಕೆಳ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಿ, ಅರ್ಜಿದಾರರಿಗೆ ನೋಟಿಸ್ ನೀಡಲಾಗಿದೆ.

ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಜಾರ್ಖಂಡ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ. ಕೊಲೆಗಾರ ಬಿಜೆಪಿಯಲ್ಲಿ ಅಧ್ಯಕ್ಷರಾಗಬಹುದು ಆದರೆ, ಕಾಂಗ್ರೆಸ್ ನಲ್ಲಿ ಅದು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ 2019ರಲ್ಲಿ ಹೇಳಿಕೆ ನೀಡಿದ್ದರು.

Latest Indian news

Popular Stories