ಇತಿಹಾಸವನ್ನು ಪುನಃ ಬರೆಯಿರಿ ಸರಕಾರ ಬೆಂಬಲ ನೀಡಲಿದೆ – ಅಮಿತ್ ಶಾ

ನವ ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತಿಹಾಸಕಾರರನ್ನು ಭಾರತೀಯ ಸನ್ನಿವೇಶದಲ್ಲಿ ಇತಿಹಾಸವನ್ನು ಪುನಃ ಬರೆಯುವಂತೆ ಕೇಳಿಕೊಂಡಿದ್ದಾರೆ.. ಅವರ ಪ್ರಯತ್ನಗಳಿಗೆ ಸರ್ಕಾರವು ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ.

“ನಾನು ಇತಿಹಾಸದ ವಿದ್ಯಾರ್ಥಿ ಮತ್ತು ನಮ್ಮ ಇತಿಹಾಸವನ್ನು ಸರಿಯಾಗಿ ಪ್ರಸ್ತುತಪಡಿಸಲಾಗಿಲ್ಲ. ತಿರುಚಲಾಗಿದೆ ಎಂದು ನಾನು ಬಹಳಷ್ಟು ಬಾರಿ ಹೇಳಿದ್ದೇನೆ. ಆದರೆ ಈಗ ನಾವು ಇದನ್ನು ಸರಿಪಡಿಸಬೇಕಾಗಿದೆ” ಎಂದು ಅಸ್ಸಾಂ ಸರ್ಕಾರದ ಸಮಾರಂಭದಲ್ಲಿ ಶಾ ಹೇಳಿದರು.

17ನೇ ಶತಮಾನದ ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ 400ನೇ ಜನ್ಮದಿನಾಚರಣೆಯ ಮೂರು ದಿನಗಳ ಆಚರಣೆಯ 2ನೇ ದಿನದಂದು ಮಾತನಾಡಿದ ಅವರು, “ಇತಿಹಾಸವನ್ನು ಸರಿಯಾಗಿ ಮತ್ತು ವೈಭವಯುತವಾಗಿ ಪ್ರಸ್ತುತಪಡಿಸುವುದನ್ನು ಯಾರು ತಡೆಯುತ್ತಿದ್ದಾರೆಂದು ನಾನು ನಿಮ್ಮನ್ನು ಕೇಳುತ್ತೇನೆ” ಎಂದು ಶಾ ಹೇಳಿದರು.

“ಇಲ್ಲಿ ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಲ್ಲಿ ವಿನಂತಿಸುತ್ತ ಈಗಿರುವ ಇತಿಹಾಸ ಸರಿಯಲ್ಲ ಇತಿಹಾಸ ಮತ್ತೊಮ್ಮೆ ಬರೆಯಬೇಕಾಗಿದೆ.ದೇಶದಲ್ಲಿ 150 ವರ್ಷಗಳ ಕಾಲ ಆಳ್ವಿಕೆ ನಡೆಸಿದ 30 ರಾಜವಂಶಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ 300 ಗಣ್ಯ ವ್ಯಕ್ತಿಗಳ ಬಗ್ಗೆ ಸಂಶೋಧನೆ ಮಾಡಲು ಪ್ರಯತ್ನಿಸಿ” ಎಂದು ಅವರು ಹೇಳಿದರು.

Latest Indian news

Popular Stories