ಉತ್ತರಾಖಂಡದಲ್ಲಿ ಕಾಂಗ್ರೆಸ್’ಗೆ ಗೆಲುವಾಗಲಿದೆಯೆಂದ ಬಿಜೆಪಿಯಿಂದ ಉಚ್ಚಾಟಿತ ಸಚಿವ ಹರಕ್ ಸಿಂಗ್

ಹೊಸದಿಲ್ಲಿ: ವಿಧಾನಸಭಾ ಚುನಾವಣೆಗೆ ಮುನ್ನ, ಉತ್ತರಾಖಂಡದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ ಎಂದು ಭಾರತೀಯ ಜನತಾ ಪಕ್ಷದ ಉಚ್ಛಾಟಿತ ಸಚಿವ ಹರಕ್ ಸಿಂಗ್ ರಾವತ್ ಹೇಳಿದ್ದಾರೆ.

ಇಂದು ಎಎನ್‌ಐ ಜೊತೆ ಮಾತನಾಡಿದ ಎಚ್‌ಎಸ್ ರಾವತ್, ಉತ್ತರಾಖಂಡದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ. ನಾನು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ.

ಸಾಮಾನ್ಯ ಜನರ ಸಮಸ್ಯೆಗಳನ್ನು ಬಿಜೆಪಿ ಎಂದಿಗೂ ಅರ್ಥಮಾಡಿಕೊಳ್ಳುವುದಿಲ್ಲ. ಆ ಪಕ್ಷ ನನಗೆ ಚೆನ್ನಾಗಿ ಗೊತ್ತು. ಅವರ ವಿಧಾನವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಮುಂದೆಯೂ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯ ಸಚಿವ ಹರಕ್ ಸಿಂಗ್ ರಾವತ್ ಅವರನ್ನು ಭಾನುವಾರ ಸಂಪುಟದಿಂದ ವಜಾಗೊಳಿಸಿದ್ದರು.

ಭಾನುವಾರ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿಯ ಉತ್ತರಾಖಂಡದ ಕೋರ್ ಗ್ರೂಪ್ ಸಭೆಯಲ್ಲಿ ರಾವತ್ ಅವರನ್ನು ಸಂಪುಟದಿಂದ ವಜಾಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ, ರಾಜ್ಯಾಧ್ಯಕ್ಷ ಮದನ್ ಕೌಶಿಕ್, ರಾಜ್ಯ ಚುನಾವಣಾ ಉಸ್ತುವಾರಿ ಪ್ರಹ್ಲಾದ್ ಜೋಶಿ, ಚುನಾವಣಾ ಸಹ ಉಸ್ತುವಾರಿ ಆರ್‌ಪಿ ಸಿಂಗ್ ಮತ್ತು ಇತರರು ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಉಪಸ್ಥಿತರಿದ್ದರು.

Latest Indian news

Popular Stories