ಕರಾವಳಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದಿನದ ವರದಿ ಏರಿಕೆಯಾಗುತ್ತಿದ್ದು, ಶುಕ್ರವಾರ ದಾಖಲೆಯ 639 ಮಂದಿಗೆ ಕೊರೊನಾ ದೃಢಪಟ್ಟಿದೆ.

299 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 2,990 ಸಕ್ರಿಯ ಪ್ರಕರಣಗಳಿವೆ. ಶೇ.5.52 ರಷ್ಟು ಪಾಸಿಟಿವಿಟಿ ದರ ಇದೆ. ಮಂಗಳೂರಿನ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ 13 ಪ್ರಕರಣ ಪತ್ತೆಯಾಗಿದ್ದು, ಆ ಪ್ರದೇಶವನ್ನು ಕ್ಲಸ್ಟರ್‌ ವಲಯವೆಂದು ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಶುಕ್ರವಾರ 497 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.6,652 ಮಂದಿಯನ್ನು ಪರೀಕ್ಷೆಗೆ ಒಳಪಡಿಸ ಲಾಗಿದ್ದು, 76 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,335 ಪ್ರಕರಣಗಳು ಸಕ್ರಿಯ ವಾಗಿವೆ ಎಂದು ಡಿಎಚ್‌ಒ ಪ್ರಕಟನೆ ತಿಳಿಸಿದೆ.

Latest Indian news

Popular Stories