ಕೇಂದ್ರ ಸರಕಾರದಿಂದ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗುತ್ತಿದೆ; ಐದು ಗ್ಯಾರಂಟಿ ನಾವು ಜಾರಿ ಮಾಡುತ್ತೇವೆ – ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಯೋಜನೆಗಳಿಗೆ ಸುಮಾರು 50 ಸಾವಿರ ಕೋಟಿ ಆಗಬಹುದು ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರುತ್ತದೆ. ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ಆದರೆ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ ಎಂದರು.

ಪ್ರಣಾಳಿಕೆಯಲ್ಲಿ ಜನರಿಗೆ ಅನೇಕ ಭರವಸೆಗಳನ್ನು ಕೊಟ್ಟಿದ್ದೆವು. ಇದು ಕೇವಲ ಒಂದು ವರ್ಷದಲ್ಲಿ ಈಡೇರಿಸುವ ಭರವಸೆ ಅಲ್ಲ. ಅಲ್ಲದೇ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡಿದ್ದೆವು. ಮೊದಲ ಸಂಪುಟದಲ್ಲಿ 5 ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ. ಕಳೆದ ಬಾರಿ ನಾವು 158 ಭರವಸೆಗಳನ್ನು ಈಡೇರಿಸಿದ್ದೆವು. ಹೆಚ್ಚುವರಿಯಾಗಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು ಎಂದರು.

Latest Indian news

Popular Stories