ಗೋವಾದಲ್ಲಿ ಕಾಂಗ್ರೆಸ್ ಸೋಲಿಸಲು ಎಎಪಿ-ಟಿಎಂಸಿ ತಂತ್ರ: ಚಿದಂಬರಂ ಆರೋಪ

ನವದೆಹಲಿ: ಗೋವಾ ವಿಧಾನಸಭೆಯಲ್ಲಿ ಸ್ಪರ್ಧಿಸುತ್ತಿರುವ ಆಮ್‌ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್, ಬಿಜೆಪಿಯೇತರ ಮತಗಳನ್ನು ವಿಭಜಿಸುತ್ತವೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಗೋವಾದ ಕಾಂಗ್ರೆಸ್ ಉಸ್ತುವಾರಿ ಪಿ. ಚಿದಂಬರಂ ಅವರು ಈ ಆರೋಪ ಮಾಡಿದ್ದು, ಜನರು ಬಿಜೆಪಿಗೆ ಇಲ್ಲವೇ ಇತರ ಪಕ್ಷಗಳಿಗೆ ಮತ ಹಾಕುತ್ತಾರೆ. ಇದರಿಂದ ಬಿಜೆಪಿ ಹೊರತಾದ ಮತಗಳು ಹಂಚಿಹೋಗುತ್ತದೆ ಎಂದು ಹೇಳಿದ್ದಾರೆ.

ಗೋವಾದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಇದೆ. ಅಲ್ಲಿ ಬದಲಾವಣೆ ಬಯಸುವವರು ಕಾಂಗ್ರೆಸ್‌ಗೆ ಮತ ನೀಡುತ್ತಾರೆ. ಆದರೆ ಇದೇ ಆಡಳಿತವೇ ಸಾಕು ಎನ್ನುವವರು ಬಿಜೆಪಿಗೆ ಮತ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ನೀಡುವ ಪ್ರಸ್ತಾವನೆ ಅನ್ವಯ ಕೇಂದ್ರ ಚುನಾವಣಾ ಸಮಿತಿ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. 2017ರ ಪರಿಸ್ಥಿತಿ ಮತ್ತೆ ಮರುಕಳಿಸದಂತೆ ಕಾಂಗ್ರೆಸ್ ಎಚ್ಚರ ವಹಿಸಲಿದೆ” ಎಂದು ಪಿ. ಚಿದಂಬರಂ ಹೇಳಿದ್ದಾರೆ.

ಬಿಜೆಪಿ 10 ವರ್ಷಗಳ ಕಾಲ ರಾಜ್ಯದಲ್ಲಿ ಆಡಳಿತ ನಡೆಸಿದೆ. ಆದರೆ ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಶೇ 65ರಷ್ಟು ಗೋವಾದ ಜನರು ರಾಜ್ಯದಲ್ಲಿ ಬದಲಾವಣೆ ಬಯಸಿದ್ದಾರೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಅಧಿಕವಾಗಿದೆ” ಎಂದು ವಿಶ್ಲೇಷಣೆ ಮಾಡಿದ್ದಾರೆ.

Latest Indian news

Popular Stories