ಟೆಸ್ಟ್ ಕ್ರಿಕೆಟ್: ನ್ಯೂಝಿಲೆಂಡ್ ವಿರುದ್ಧ ಭರ್ಜರಿ‌ ಜಯ ದಾಖಲಿಸಿದ ಬಾಂಗ್ಲಾದೇಶ

ಬಾಂಗ್ಲಾದೇಶ ನ್ಯೂಝಿಲೆಂಡ್ ತಂಡದ ವಿರುದ್ಧ ಟೆಸ್ಟ್ ಕ್ರಿಕೆಟ್ ನಲ್ಲಿ ಭರ್ಜರಿ ಎಂಟು ವಿಕೆಟ್ ಗಳ ಜಯ ಸಾಧಿಸಿದೆ. ಈ ಮೂಲಕ 21 ವರ್ಷದ ನಂತರ ಬಾಂಗ್ಲಾದೇಶ ಈ ಸಾಧನೆ ಮಾಡಿದೆ.

40 ರನ್ ಗಳ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿ ಇತಿಹಾಸ ನಿರ್ಮಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ ನ್ಯೂಝಿಲೆಂಡ್ 328 ರನ್ ಬಾರಿಸಿತ್ತು. ಪ್ರತಿಯಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ 458 ರನ್ ದಾಖಲಿಸಿತ್ತು.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ನ್ಯೂಝಿಲೆಂಡ್ ಅನ್ನು 169 ರನ್ನಿಗೆ ಕಟ್ಟಿ ಹಾಕಿದ ಬಾಂಗ್ಲಾದೇಶ ಕೇವಲ 40 ರನ್ ಗಳ ಗುರಿ ಪಡೆಯಿತು. ಸುಲಭವಾಗಿ ಬೆನ್ನಟ್ಟಿದ ಬಾಂಗ್ಲಾದೇಶ ಎರಡು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿ ದಾಖಲೆ ನಿರ್ಮಿಸಿದೆ. ಇಬಾದತ್ ಹುಸೈನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.

Latest Indian news

Popular Stories