‘ಟ್ರೆಡಿಷನಲ್ ಡೆ’ ವಿವಾದ: ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ

ಮಂಗಳೂರು: ಟ್ರೇಡಿಷನಲ್ ಡೆ ವಿವಾದಕ್ಕೆ ಸಂಬಂಧಿಸಿದಂತೆ ಎರಡು ವಿದ್ಯಾರ್ಥಿಗ ಗುಂಪಿನ ನಡುವೆ ವಾಗ್ವಾದ ನಡೆದು ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ.

ಈ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳನ್ನು ಸಾಝ್ ಮತ್ತು ಸ್ವರೂಪ್ ಎಂದು ಮಾಹಿತಿ‌ ಲಭ್ಯವಾಗಿದೆ.

ಟ್ರೇಡಿಷನಲ್ ಡೆ ಪೂರ್ವ ತಯಾರಿ ಸಂದರ್ಭದಲ್ಲಿ ಯಾವುದೋ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ವಿದ್ಯಾರ್ಥಿಗಳು ಹೊಡೆದಾಟಿಕೊಂಡಿದ್ದಾರೆಂದು ವರದಿಯಾಗಿದೆ. ಈಗಾಗಲೇ ಘಟನೆಯ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಉಭಯ ತಂಡಗಳ ತಲಾ 4ರಂತೆ 8 ಮಂದಿಯನ್ನು ನಿನ್ನೆ ಅಮಾನತುಗೊಳಿಸಿ ಮನೆಗೆ ಕಳುಹಿಸಿದ್ದರು.

ನಂತರ ಕಾಲೇಜಿನ ಹೊರಗಡೆ ನಡೆದ ಹೊಡೆದಾಟದಲ್ಲಿ ಅಂತಿಮ ವರ್ಷದ ನಲ್ವತ್ತು ವಿದ್ಯಾರ್ಥಿಗಳು ಸೇರಿ ತೃತೀಯ ವರ್ಷದ ನಾಲ್ಕು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ವಿಚಾರದಲ್ಲಿ ಪೊಲೀಸರು ವಿದ್ಯಾರ್ಥಿಗಳ ತನಿಖೆ ನಡೆಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಸಿಸ್ಟೆಂಟ್ ಕಮಿಷನರ್ ಹರಿರಾಂ ಶಂಕರ್,ಮೂಡುಬಿದಿರೆಯ ಯೆನೆಪೊಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅ.30ರಂದು ನಡೆಯಲಿರುವ ಕಾರ್ಯಕ್ರಮವೊಂದರ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಅಂತಿಮ ವರ್ಷದ ವಿದ್ಯಾರ್ಥಿಗಳ ಒಂದು ಗುಂಪು 3ನೇ ವರ್ಷದ ವಿದ್ಯಾರ್ಥಿಗಳ ಒಂದು ಗುಂಪಿನೊಂದಿಗೆ ಘರ್ಷಣೆ ಉಂಟಾಗಿದೆ. ಈ ಸಂದರ್ಭ ವಿದ್ಯಾರ್ಥಿಗಳ ಒಂದು ಗುಂಪಿನ ಮೇಲೆ ಹೆಲ್ಮೆಟ್, ಕಲ್ಲು ಮತ್ತು ಕೈಯಿಂದ ಹಲ್ಲೆ ನಡೆಸಲಾಗಿದೆ. ಇತ್ತಂಡಗಳು ದೂರು ದಾಖಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

Latest Indian news

Popular Stories