ತೀವ್ರಗೊಂಡ ‘ಮಹಾ’ ಬಿಕ್ಕಟ್ಟು: ಏಕನಾಥ್ ಶಿಂಧೆಗೆ ಬೆಂಬಲ ವ್ಯಕ್ತಪಡಿಸಿ ಪತ್ರಕ್ಕೆ ಸಹಿ ಹಾಕಿದ ಶಿವಸೇನೆ ಶಾಸಕರು; ವಿಶ್ವಾಸಮತ ಯಾಚಿಸಲು ಸಿದ್ಧತೆ!

ಮುಂಬೈ: ಏಳು ಮಂದಿ ಸ್ವತಂತ್ರ ಶಾಸಕರು ಹಾಗೂ 33 ಶಿವಸೇನೆ ಶಾಸಕರು ಸೇರಿದಂತೆ ಮಹಾರಾಷ್ಟ್ರದ 40 ಶಾಸಕರು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆಯವರಿಗೆ ಬೆಂಬಲ ವ್ಯಕ್ತಪಡಿಸಿ ಪತ್ರಕ್ಕೆ ಸಹಿ ಹಾಕಿದ್ದು, ರಾಜ್ಯಪಾಲರ ಭೇಟಿಯಾಗಿ ವಿಶ್ವಾಸಮತ ಯಾಚನೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೆ ಅನುಮತಿ ನೀಡುವಂತೆ ಬಂಡಾಯ ಶಾಸಕರು ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ಪತ್ರ ಬರೆಯಲಿದ್ದಾರೆಂದು ಮೂಲಗಳು ತಿಳಿಸಿವೆ.

ಶಿಂಧೆ ನೇತೃತ್ವದ 40 ಶಾಸಕರು ಬುಧವಾರ ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಯಲ್ಲಿರುವ ಐಷಾರಾಮಿ ಹೋಟೆಲ್‌ನಲ್ಲಿ ತಂಗಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸುವ ಪ್ರಯತ್ನದಲ್ಲಿ ಶಿಂಧೆ ಮತ್ತು ಇತರೆ ಶಾಸಕರು ಬಿಜೆಪಿಗೆ ಬೆಂಬಲ ಸೂಚಿಸಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

Latest Indian news

Popular Stories