ತ್ರಿಪುರಾ ಬಿಜೆಪಿಗೆ ಬಿಗ್ ಶಾಕ್: ಇಬ್ಬರು ಶಾಸಕರ ರಾಜೀನಾಮೆ!

ಅಗರ್ತಲಾ: ಬಿಜೆಪಿ ಶಾಸಕರಾದ ಸುದೀಪ್ ರಾಯ್ ಬರ್ಮನ್ ಮತ್ತು ಆಶಿಶ್ ಸಾಹಾ ಅವರು ಸೋಮವಾರ ತ್ರಿಪುರಾ ವಿಧಾನಸಭೆಗೆ ರಾಜೀನಾಮೆ ನೀಡಿದ್ದು, ತಮ್ಮ ಪಕ್ಷದ ಸದಸ್ಯತ್ವವನ್ನೂ ತ್ಯಜಿಸಿದ್ದಾರೆ.

ರಾಯ್ ಬರ್ಮನ್ ಮತ್ತು ಸಾಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು.

ಇಬ್ಬರು ಶಾಸಕರು ಕಾಂಗ್ರೆಸ್ ಸೇರಬಹುದು ಎಂಬ ಊಹಾ ಪೋಹಗಳ ನಡುವೆ ಇಬ್ಬರು ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ತಮ್ಮ ಮುಂದಿನ ನಡೆಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಮಂಗಳವಾರ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ನಾವು ಫೆಬ್ರವರಿ 12 ರಂದು ತ್ರಿಪುರಾಕ್ಕೆ ಹಿಂತಿರುಗುತ್ತೇವೆ. ನಾವು ಬಿಜೆಪಿ ರಾಜ್ಯಾಧ್ಯಕ್ಷ ಮಾಣಿಕ್ ಸಹಾ ಅವರಿಗೆ ಪತ್ರವನ್ನು ಕಳುಹಿಸಿದ್ದೇವೆ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇವೆ” ಎಂದು ಸಾಹಾ ಹೇಳಿದರು. ಇಬ್ಬರು ಶಾಸಕರ ರಾಜೀನಾಮೆಯಿಂದ 60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯೆ 33ಕ್ಕೆ ಕುಸಿದಿದೆ.

Latest Indian news

Popular Stories