ನಾಲ್ವರು ಗುಜರಾತಿಗಳು ಭಾರತದ ಆಧುನಿಕ ಇತಿಹಾಸದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ – ಕೇಂದ್ರ ಗೃಹ ಸಚಿವ ಅಮಿತ್ ಶಾ

ನವ ದೆಹಲಿ:ನಾಲ್ವರು ಗುಜರಾತಿಗಳಾದ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೊರಾರ್ಜಿ ದೇಸಾಯಿ ಮತ್ತು ನರೇಂದ್ರ ಮೋದಿ ಅವರು ಭಾರತದ ಆಧುನಿಕ ಇತಿಹಾಸದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.

ಗುಜರಾತಿ ಸಮಾಜದ 125 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಆಯೋಜಿಸಲಾದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶಾ, ಪ್ರಧಾನಿ ನರೇಂದ್ರ ಮೋದಿಯವರಿಂದಾಗಿ ಭಾರತದ ಕೀರ್ತಿ ಪ್ರಪಂಚದಾದ್ಯಂತ ಹರಡುತ್ತಿದೆ ಎಂದು ಹೇಳಿದರು.

“ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೊರಾರ್ಜಿ ದೇಸಾಯಿ ಮತ್ತು ನರೇಂದ್ರ ಮೋದಿ, ಈ ನಾಲ್ವರು ಗುಜರಾತಿಗಳು ಭಾರತದ ಆಧುನಿಕ ಇತಿಹಾಸದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ” ಎಂದು ಅವರು ಹೇಳಿದ್ದರು.

Latest Indian news

Popular Stories