ಪಾಕ್ ವಿರುದ್ಧದ ಸರಣಿಯಿಂದ ಹಿಂದೆ ಸರಿದ ಆಸ್ಟ್ರೇಲಿಯಾದ ಸ್ಪಿನ್ ಕೋಚ್ ಶ್ರೀಧರನ್ ಶ್ರೀರಾಮ್!

ಮೆಲ್ಬೋರ್ನ್: ಪಾಕಿಸ್ತಾನ ವಿರುದ್ಧದ ಕ್ರಿಕೆಟ್ ಸರಣಿಯಿಂದ ಆಸ್ಟ್ರೇಲಿಯಾದ ಸ್ಪಿನ್ ಕೋಚ್ ಶ್ರೀಧರನ್ ಶ್ರೀರಾಮ್ ಹಿಂದೆ ಸರಿದಿದ್ದಾರೆ.

ಕಳೆದ 6 ವರ್ಷಗಳಿಂದ ಶ್ರೀರಾಮ್ ಆಸ್ಟ್ರೇಲಿಯಾ ತಂಡದ ಸ್ಪಿನ್ ಕೋಚ್ ಆಗಿದ್ದಾರೆ. ಆದರೆ ಇದೀಗ ಸರಣಿಯಿಂದ ಹಿಂದೆ ಸರಿದಿರುವುದರಿಂದ ಆಸ್ಟ್ರೇಲಿಯಾ ಈಗ ಪಾಕಿಸ್ತಾನ ಪ್ರವಾಸಕ್ಕಾಗಿ ಸ್ಪಿನ್ ಬೌಲಿಂಗ್ ಕೋಚ್ ಅನ್ನು ಹುಡುಕುತ್ತಿದ್ದು ನ್ಯೂಜಿಲ್ಯಾಂಡ್ ನ ಮಾಜಿ ನಾಯಕ ಡೇನಿಯಲ್ ವೆಟ್ಟೂರಿ ಹೆಸರು ಮುಂಚೂಣಿಯಲ್ಲಿದೆ.

2013ರಲ್ಲಿ ಆಸ್ಟ್ರೇಲಿಯಾ ತಂಡ ಸ್ಪಿನ್ ಬೌಲಿಂಗ್ ಕೋಚ್ ಇಲ್ಲದೆ ಉಪಖಂಡಕ್ಕೆ ಪ್ರವಾಸ ಕೈಗೊಂಡಿತ್ತು. ಈ ವೇಳೆ ಭಾರತದಲ್ಲಿ ಆಸ್ಟ್ರೇಲಿಯಾ ಅತ್ಯಂತ ಹೀನಾಯ ಸೋಲು ಕಂಡಿತ್ತು. ಇದೀಗ ಶ್ರೀರಾಮ್ ಸರಣಿಯಿಂದ ಹಿಂದೆ ಸರಿದಿರುವುದು ಆಸ್ಟ್ರೇಲಿಯಾ ತಂಡಕ್ಕೆ ಸಂಕಷ್ಟ ತಂದಿಟ್ಟಿದೆ.

Latest Indian news

Popular Stories