ಬಿಜೆಪಿ ಶಾಸಕನ ಮಗ ಸೇರಿದಂತೆ ಅಪಘಾತದಲ್ಲಿ ಮಡಿದ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು

ಮುಂಬೈ: ಭಯಾನಕ ಅಪಘಾತದಲ್ಲಿ ಬಿಜೆಪಿ ಶಾಸಕ ವಿಜಯ್ ಅವರ ಪುತ್ರ ಸೇರಿದಂತೆ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಕಾರು ಅಪಘಾತದಲ್ಲಿ ಮೃತಪಟ್ಟಿರುವ ಕುರಿತು ವರದಿಯಾಗಿದೆ.

ವಾರ್ದದಿಂದ ಡಿಯೋಲಿಗೆ ಹೋಗುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸೆಲ್ಸುರಾ ಎಂಬಲ್ಲಿ ಕಾರು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ.

ಎಲ್ಲ ವಿದ್ಯಾರ್ಥಿಗಳು ಸವಾಂಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ‌. ಪ್ರಧಾನಿ ನರೇಂದ್ರ ‌ಮೋದಿ ಸಂತಾಪ ವ್ಯಕ್ತಪಡಿಸಿದ್ದು ಮೃತ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Latest Indian news

Popular Stories