ಬೆಂಗಳೂರು: ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್

ಬೆಂಗಳೂರು: ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ.

ಬೆಂಗಳೂರಿನ ಚಾಮರಾಜಪೇಟೆ(chamarajpet)ಯ ಮಕ್ಕಳಕೂಟ(makkala koota) ಬಳಿ ಈ ಘಟನೆ ನಡೆದಿದ್ದು, ದೀಪಾಂಜಲಿನಗರ ಡಿಪೋಗೆ ಸೇರಿದ K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ (KA 57 F 1592) ಬೆಂಕಿಗಾಹುತಿಯಾಗಿದೆ. ಬಸ್ ಚಲಿಸುತ್ತಿದ್ದಾಗ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಬಸ್ ನ ಇಂಜಿನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಬಳಿಕ ನೋಡನೋಡುತ್ತಲೇ ಬೆಂಕಿಯ ರಭಸ ಜೋರಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ.

ಬಸ್ ನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಚಾಲಕ ಮತ್ತು ನಿರ್ವಾಹಕರು ಬಸ್ ನಿಂದ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಈ ವೇಳೆ ಬಸ್ ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಬಳಿಕ ಸಿಬ್ಬಂದಿ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ.

ಇನ್ನು ಬಸ್ ನಲ್ಲಿದ್ದ ಫಸ್ಟ್ ಏಯ್ಡ್​ ಹಾಗೂ ಟಿಕೆಟ್ ಹಾಗೂ ದಿನದ ಪಾಸ್ ಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Latest Indian news

Popular Stories