ಬೆಂಗಳೂರು: ಸಿಲಿಂಡರ್ ಸ್ಪೋಟ – ಇಬ್ಬರ ಸಜೀವ ದಹನ

ಬೆಂಗಳೂರು: ನಗರದ ದೇವರಚಿಕ್ಕನಹಳ್ಳಿಯ ಆಶ್ರಿತ್ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದೆ.

ಸಂಜೆ 41.5ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಇಬ್ಬರು ಸಜೀವದಹನವಾಗಿದ್ದು ಹಲವರಿಗೆ ಸುಟ್ಟ ಗಾಯಗಳಾಗಿವೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದು ಅಕ್ಕಪಕ್ಕದ ಮನೆಗಳಿಗೂ ಹಬ್ಬುತ್ತಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ ಐದರಿಂದ ಆರು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Latest Indian news

Popular Stories