ಭಾರತದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿಂದು 2.68 ಲಕ್ಷ ಹೊಸ ಕೇಸ್ ಪತ್ತೆ, 402 ಮಂದಿ ಮೃತ್ಯು

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ನಾಗಾಲೋಟ ಮುಂದುವರೆದಿದ್ದು, ಶನಿವಾರ 2,68,833 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದೆ. ಅಲ್ಲದೆ, 402 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,68,50,962ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,752ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,17,820ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,22,684 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,49,47,390ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,87,457 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,90,99,084 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,54,61,39,465 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Latest Indian news

Popular Stories