ಭಾರತದಲ್ಲಿ 24ಗಂಟೆಯಲ್ಲಿ 12,847 ಕೋವಿಡ್ ಪ್ರಕರಣ ದೃಢ, 14 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 12,847 ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,70,577ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಜೂನ್ 17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದಾಗಿ 14 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,817ಕ್ಕೆ ಏರಿಕೆಯಾಗಿದೆ. ಕೋವಿಡ್ ಚೇತರಿಕೆ ಪ್ರಮಾಣ ಶೇ.98.64ರಷ್ಟಿದೆ.

24ಗಂಟೆಯಲ್ಲಿ ದೇಶದಲ್ಲಿ 4,848 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.2.47ರಷ್ಟಿದೆ ಮತ್ತು ವಾರದ ಪಾಸಿಟಿವಿಟಿ ದರ ಶೇ.2.41ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಈವರೆಗೆ ಒಟ್ಟು 4,26,82,697 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿನ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 195.85 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ಹೇಳಿದೆ.

Latest Indian news

Popular Stories