ರಾಜ್ಯದಲ್ಲಿ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 626 ಸೇರಿ 676 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 676 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,62,775ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ. ಇದರೊಂದಿಗೆ ಸಾವಿನ ಸಂಖ್ಯೆ 40,071 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 626 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,97,860ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರು ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 804 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,17,770ಕ್ಕೆ ಏರಿಕೆಯಾಗಿದೆ. ಇನ್ನು 4,892 ಸಕ್ರಿಯ ಪ್ರಕರಣಗಳಿವೆ.

Latest Indian news

Popular Stories