ರಾಜ್ಯ ಬಿಜೆಪಿ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ – ಸಿದ್ದರಾಮಯ್ಯ ಸವಾಲ್

ಬೆಂಗಳೂರು: ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ.
ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ ಬಿಜೆಪಿಯವರೇ? ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ?
ಜನ ಬಂಡೆದಿದ್ದಾರೆ, ಎಚ್ಚರ..! ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯ ಬಿಜೆಪಿ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ.ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಡಿಕೆಶಿ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಮುಖ್ಯಮಂತ್ರಿ ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ?

ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರ, ವಿರೋಧಿಗಳ ಚಾರಿತ್ರ್ಯಹನನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ.

ಸಾಮಾಜಿಕ ಮಾಧ್ಯಮವೂ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಬಿಜೆಪಿ ಅವರಷ್ಟು ದುರುಪಯೋಗ ಪಡಿಸಿಕೊಂಡ ರಾಜಕೀಯ ಪಕ್ಷ ಜಗತ್ತಿನಲ್ಲಿ ಇನ್ನೊಂದಿಲ್ಲ ಎಂದರು.

ರಾಜ್ಯ ಬಿಜೆಪಿಯ ಅಧಿಕೃತ ಸೋಷಿಯಲ್ ಮೀಡಿಯಾಗಳಲ್ಲಿಯೇ ನನ್ನ ವಿರುದ್ಧದ ಕುತ್ಸಿತ ಹೇಳಿಕೆಗಳು, ವಿರೂಪಗೊಳಿಸಿದ ಪೋಟೊಗಳ ವಿವರ ಕೊಡುತ್ತೇನೆ, ಅವರನ್ನೂ ಬಂಧಿಸಿ.
ನಾನು ಅಧಿಕಾರದಲ್ಲಿದ್ದಾಗಲೇ ಇಂಥವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿಲ್ಲ. ಇದು ನಾನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಟ್ಟ ಗೌರವ.

ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪ-ಪ್ರತ್ಯಾರೋಪ ಸಹಜ ವಿದ್ಯಮಾನವಾದರೂ ಇದನ್ನು ಇಷ್ಟೊಂದು ಕೀಳು ಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ.

ಏನು ಸಿ.ಎಮ್ ಅವರೇ, ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ? ಎಂದು ಹೇಳಿದ್ದಾರೆ.

Latest Indian news

Popular Stories