ವಿರೋಧ ಪಕ್ಷಗಳು ಅಧಿಕಾರಕ್ಕೆ ಬಂದರೆ ದೊಡ್ಡ ಕೊಡುಗೆ ಘೋಷಿಸಿದ ನಿತೀಶ್ ಕುಮಾರ್

ಬಿಹಾರ: ಬಿಜೆಪಿ ಸಖ್ಯ ತೊರೆದ ನಿತೀಶ್ ಕುಮಾರ್ ರಾಷ್ಟ್ರ ರಾಜಕಾರಣದಲ್ಲಿ ಇದೀಗ ಸಕ್ರಿಯರಾಗಿದ್ದಾರೆ. 2024 ರ ಚುನಾವಣೆಯಲ್ಲಿ ವಿರೋಧ ಪಕ್ಷಗಳನ್ನು ಒಗ್ಗೂಡಿಸಿ ಗೆಲುವು ಸಾಧಿಸಲು ಪ್ರಯತ್ನ ನಡೆಸುತ್ತಿದ್ದಾರೆ.

ಇದೀಗ ವಿರೋಧ ಪಕ್ಷಗಳು 2024 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡಲಾಗುವುದೆಂಬ ದೊಡ್ಡ ಆಶ್ವಾಸನೆಯೊಂದನ್ನು ಘೋಷಿಸಿದ್ದಾರೆ. 2007 ರಿಂದ ಬಿಹಾರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆಯಿಟ್ಟಿರುವ ನಿತೀಶ್ ಈ ಘೋಷಣೆ ರಾಜ್ಯ ಚುನಾವಣೆ ಹಿನ್ನಲೆಯಲ್ಲೂ ಮಹತ್ವ ಪಡೆದುಕೊಂಡಿದೆ.

ಇನ್ನೂ ವಿಶೇಷ ಸ್ಥಾನಮಾನ ಪಡೆದ ರಾಜ್ಯಗಳಿಗೆ ಕೇಂದ್ರ ಸರಕಾರದಿಂದ 90:10 ದರದಲ್ಲಿ ಕೇಂದ್ರದ ಯೋಜನೆಗಳಿಗೆ ಅನುದಾನ ಲಭ್ಯವಾಗುತ್ತದೆ. ಇದೀಗ ದೇಶದಲ್ಲಿ ಒಟ್ಟು ಹನ್ನೊಂದು ರಾಜ್ಯಗಳು ವಿಶೇಷ ಸ್ಥಾನಮಾನವನ್ನು ಪಡೆದುಕೊಂಡಿದೆ. ರಾಜ್ಯದ ವಿಶೇಷ ಸ್ಥಾನಮಾನಕ್ಕೆ ಸಂವಿಧಾನದಲ್ಲಿ ಯಾವುದೇ ಪ್ರತ್ಯೇಕ ವರ್ಗವಿಲ್ಲ. ಆದರೆ ರಾಷ್ಟ್ರೀಯ ಅಭಿವೃದ್ಧಿ ನಿಗಮದಡಿಯಲ್ಲಿ ಈ ಹನ್ನೊಂದು ರಾಜ್ಯಗಳಿಗೆ ವಿವಿಧ ಕಾರಣಗಳಡಿಯಲ್ಲಿ ಸ್ಥಾನಮಾನ ನೀಡಲಾಗಿದೆ.

Latest Indian news

Popular Stories