ಶಿವಮೊಗ್ಗ: ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಯಿಂದ ಹಲ್ಲೆ, ಪೊಲೀಸರಿಂದ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಅಸ್ಲಂ ಎಂಬಾತನ ಎಡಗಾಲಿಗೆ ಗುಂಡು ಹಾರಿಸಲಾಗಿದೆ. ಪುರಲೆ ರಸ್ತೆಯಲ್ಲಿ ನಿರ್ಮಾಣವಾಗಿರುವ ಬಡಾವಣೆಯೊಂದರಲ್ಲಿ ಅಸ್ಲಂ ಅವಿತುಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆ ಪೊಲೀಸರು ಆತನ ಬಂಧನಕ್ಕೆ ತೆರಳಿದ್ದರು.

Latest Indian news

Popular Stories