ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್; ಮಂಗಳೂರಿನಲ್ಲಿ 21 ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮುವಾದಿ ಸಂದೇಶಗಳನ್ನು ಪೋಸ್ಟ್ ಮಾಡಿದವರ ವಿರುದ್ಧ ಕಳೆದ 30 ದಿನಗಳಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ .

ಈ ಕುರಿತು ಮಂಗಳೂರು ಪೊಲೀಸ್ ಕಮಿಷನರ್ (Mangaluru Police Commissioner) ಕುಲದೀಪ್ ಕುಮಾರ್ ಜೈನ್ (Kuldeep Kumar Jain) ಮಾಹಿತಿ ನೀಡಿದ್ದಾರೆ.

ಮೇಲಿನ ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಜೈನ್, ಧರ್ಮಕ್ಕೆ ಸಂಬಂಧಿಸಿದ ಪ್ರಚೋದನಾಕಾರಿ ಸಂದೇಶಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಮತ್ತು ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

Latest Indian news

Popular Stories