ಸೆ.26 ರಿಂದ ಮಲ್ಪೆ ಸೈಂಟ್ ಮೇರಿಸ್ ದ್ವೀಪ ಪ್ರವಾಸಿಗರಿಗೆ ಮುಕ್ತ?

ಮಲ್ಪೆ: ಕಳೆದ ನಾಲ್ಕು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪ ಸೆ. 26ರಿಂದ ಪ್ರವಾಸಿಗರಿಗೆ ಮತ್ತೆ ತೆರೆದುಕೊಳ್ಳಲಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಬುಧವಾರದಿಂದ ಇಲ್ಲಿ ಸ್ವಚ್ಚತಾ ಕಾರ್ಯ ನಡೆಯುತ್ತಿದೆ.

ಜಿಲ್ಲಾಡಳಿತ ಪ್ರತೀ ವರ್ಷದಂತೆ ಮೇ 15ರಿಂದ ಸೆ. 15ರ ವರಗೆ ದ್ವೀಪಕ್ಕೆ ಜನ ಪ್ರವೇಶ ನಿರ್ಬಂಧ ಹೇರುತ್ತದೆ. ಈ ಸಮಯದಲ್ಲಿ ಪ್ರವಾಸಿ ಬೋಟುಯಾನಗಳು ಸ್ಥಗಿತಗೊಳ್ಳುತ್ತವೆ. ಮಲ್ಪೆ ಬೀಚ್‌ನಲ್ಲೂ ಜಲಸಾಹಸ ಕ್ರೀಡೆಗಳಿಗೆ ನಿಷೇಧ ಇರುತ್ತದೆ. ಇದೀಗ ಸೆ. 26ರಿಂದ ಮತ್ತೆ ತೆರೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Latest Indian news

Popular Stories