ಹಿಜಾಬ್ ಹಕ್ಕಿಗಾಗಿ ನ್ಯಾಯಾಲಯ ಮೆಟ್ಟಿಲೇರಿದ್ದ ಉಡುಪಿಯ ಇಬ್ಬರು ವಿದ್ಯಾರ್ಥಿನಿಯರು ಪ್ರಥಮ ಪಿಯುಸಿ ಪರೀಕ್ಷೆಗೆ ಗೈರು

ಉಡುಪಿ: ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದ ಇಬ್ಬರು ವಿದ್ಯಾರ್ಥಿನಿಯರು ಪ್ರಥಮ ಪಿಯುಸಿ ಪರೀಕ್ಷೆಗೆ ಗೈರಾಗಿದ್ದಾರೆ.

ಒಟ್ಟು ಆರು ವಿದ್ಯಾರ್ಥಿನಿಯರಲ್ಲಿ ಇಬ್ಬರು ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಅವರು ಇಂದು ಪ್ರಥಮ ಪಿಯುಸಿ ಪರೀಕ್ಷೆ ಬರೆಯಲಿಲ್ಲ ಎಂದು ತಿಳಿದು ಬಂದಿದೆ. ಶಿರವಸ್ತ್ರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲದ ಕಾರಣ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

Latest Indian news

Popular Stories