ಹೆಚ್ಚುತ್ತಿರುವ ಕೋವಿಡ್-19 ಸೋಂಕು: ದ.ಕದಲ್ಲಿ ಹನ್ನೆರಡು ಶಾಲೆ ಬಂದ್

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಶಾಲಾ ಮಕ್ಕಳಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಂಕಿಗೊಳಗಾಗಿದ್ದಾರೆ. ಅಲ್ಲದೆ, 68 ಶಾಲಾ ಶಿಕ್ಷಕರಲ್ಲೂ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಸೋಂಕಿರುವ ಶಾಲೆಗಳನ್ನು ಬಂದ್ ಮಾಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಜನವರಿ 1 ರಿಂದ 27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68 ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಒಂದರಲ್ಲೇ 57 ವಿದ್ಯಾರ್ಥಿಗಳು ಹಾಗೂ 8 ಮಂದಿ ಶಿಕ್ಷಕರಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.

ಮಂಗಳೂರಿನಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗುವೆ. ಆದರೆ, ಆಸ್ಪತ್ರೆಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ಶೂನ್ಯದಲ್ಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ಮಾತನಾಡಿ, ಐದಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾದರೂ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Latest Indian news

Popular Stories