ಹೆಬ್ರಿ: ಕಡಿಮೆ ಅಂಕ ಪಡೆದ ಕಾರಣ ಮನನೊಂದು ಜೀವನ ಅಂತ್ಯಗೊಳಿಸಿದ ವಿದ್ಯಾರ್ಥಿನಿ

ಹೆಬ್ರಿ, ನ.29: ಪ್ರಥಮ ಪಿಯು ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ ನಿವಾಸದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಪೆರ್ಡೂರಿನ ನಿವಾಸಿ ತೃಪ್ತಿ (17) ತನ್ನ ಮನೆಯ ಮಲಗುವ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾದ ಯುವತಿ.

ತೃಪ್ತಿ ಅಧ್ಯಯನದಲ್ಲಿ ಉತ್ತಮವಾಗಿದ್ದರೂ ಇತ್ತೀಚಿನ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದರಿಂದ ಖಿನ್ನತೆಗೆ ಒಳಗಾಗಿದ್ದರು. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ರೀತಿಯ ತೊಂದರೆಗೆ ಒಳಗಾಗಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯವನ್ನು ಪಡೆಯಿರಿ. ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 9152987821.

Latest Indian news

Popular Stories