ಹೊಟ್ಟೆಪಾಡಿಗಾಗಿ ಜಾತ್ರೆಗಳಲ್ಲಿ ವ್ಯಾಪಾರ ಮಾಡುವವರಿಗೆ ಧರ್ಮದ ಹೆಸರಿನಲ್ಲಿ ನಿಷೇಧ ಖಂಡನೀಯ – ರಮೇಶ ಕಾಂಚನ್

ಉಡುಪಿ: ಬೀದಿ ಬೀದಿಗಳಲ್ಲಿ ವ್ಯಾಪಾರ ಮಾಡುವ ಜನರು ಬಡವರು. ಅವರಲ್ಲಿ ಯಾವುದೇ ರೀತಿಯ ಜಾತಿ ಭೇದವಿಲ್ಲ. ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಅವರು ಅವರ ಹಾಗೂ ಅವರ ಕುಟುಂಬದ ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುತ್ತಾರೆ. ಇಂತಹ ವ್ಯಾಪಾರಿಗಳಿಗೆ ನಿಷೇಧ ಹೇರುವುದು ಸಂವಿಧಾನ ವಿರೋಧಿ ನಿಲುವಾಗಿದೆ ಎಂದು ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ಹೇಳಿದ್ದಾರೆ.

ಬೀದಿ ಬೀದಿಗಳಲ್ಲಿ ವ್ಯಾಪಾರ ಮಾಡುವ ಜನರು ಎಲ್ಲಾ ಧರ್ಮಗಳ ಜಾತ್ರೆಯಲ್ಲಿ ಇರುತ್ತಾರೆ. ಎಲ್ಲಾ ಧರ್ಮದಲ್ಲಿಯೂ ಇಂತಹ ವ್ಯಾಪಾರಸ್ಥರನ್ನು ನಾವು ನೋಡಬಹುದು. ಇತ್ತೀಚಿನ ದಿನಗಳಲ್ಲಿ ಒಂದು ಧರ್ಮದ ಧಾರ್ಮಿಕ ಕಾರ್ಯಕ್ರಮಕ್ಕೆ ಇನ್ನೊಂದು ಧರ್ಮದವರನ್ನು ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಹೇಳುವುದು ಸೌಹಾರ್ದತೆಗೆ ಧಕ್ಕೆ ತರುವಂತದಾಗಿದೆ ಹಾಗೂ ಸಂವಿಧಾನ ವಿರೋಧಿ ನಿಲುವು ಆಗಿರುತ್ತದೆ. ಈಗಾಗಲೇ ಕೊರೋನಾ ಎಂಬ ಮಹಾಮಾರಿಯಿಂದ ಜನರಿಗೆ ಬದುಕಲು ಕಷ್ಟವಾಗಿದೆ. ಇಂತಹ ಸಮಯದಲ್ಲಿ ಬಡ ವ್ಯಾಪಾರಸ್ಥರಿಗೆ ತಮ್ಮ ದಿನನಿತ್ಯದ ಅವಶ್ಯಕತೆಗೊಸ್ಕರ ವ್ಯಾಪಾರ ಮಾಡಲು ಜಿಲ್ಲಾಡಳಿತ ಮತ್ತು ಸರ್ಕಾರ ತಕ್ಷಣವೇ ಮಧ್ಯ ಪ್ರವೇಶಿಸಿ ಯಾವುದೇ ಜಾತಿ, ಮತಭೇದ ನೋಡದೆ ಈ ಬಡ ಬೀದಿ ಬದಿ ವ್ಯಾಪಾರಿಗಳಿಗೆ ನ್ಯಾಯ ಒದಗಿಸಬೇಕಾಗಿ ಆಗ್ರಹಿದ್ದಾರೆ.

ಇದೇ ಸಂದರ್ಭದಲ್ಲಿ ಮುಲ್ಕಿಯ ಪ್ರಸಿದ್ಧ ದೇವಸ್ಥಾನವಾದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮಂಡಳಿಯು ತೆಗೆದುಕೊಂಡ ನಿರ್ಧಾರವು ಸೌಹಾರ್ದತೆಯನ್ನು ಮೂಡಿಸುವಂತದಾಗಿದೆ. ಈ ನಿಲುವನ್ನು ನಾನು ಸ್ವಾಗತಿಸುತ್ತೇನೆ ಎಂದು ಅವರು ಹೇಳಿದ್ದಾರೆ

Latest Indian news

Popular Stories