ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯೊಬ್ಬಳು ಸೋಮವಾರ ಮೃತಪಟ್ಟಿದ್ದು, ವಾರಾಂತ್ಯದಲ್ಲಿ ಷಾವರ್ಮಾ ಮತ್ತು ಇತರ ಆಹಾರ ಪದಾರ್ಥಗಳನ್ನು ಸೇವಿಸಿದ ನಂತರ 43 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಮಕ್ಕಲ್ ಜಿಲ್ಲಾಧಿಕಾರಿ ಎಸ್ ಉಮಾ ಅವರ ಪ್ರಕಾರ, ಪರಮತಿ ಬಳಿಯ ಉಪಾಹಾರ ಗೃಹದಲ್ಲಿ ಶಾವರ್ಮಾ, ಫ್ರೈಡ್ ರೈಸ್ ಮತ್ತು ಗ್ರಿಲ್ಡ್ ಚಿಕನ್ ಸೇವಿಸಿದ 12 ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು, ಐದು ಮಕ್ಕಳು ಮತ್ತು ಗರ್ಭಿಣಿ ಮಹಿಳೆ ಸೇರಿದಂತೆ 43 ಜನರು ಆಸ್ಪತ್ರೆಗೆ ಸೇರಿದ್ದಾರೆ.
ಅಂಗಡಿಯಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿನಿಯರಿಗೆ ಭೇದಿ, ತಲೆಸುತ್ತು, ವಾಂತಿ ಕಾಣಿಸಿಕೊಂಡಿದ್ದು, ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಮಾ ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂಬ ಮಾಹಿತಿ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.