Featured StoryNational

ಎಚ್‌ಡಿಎಫ್‌ಸಿ ಬ್ಯಾಂಕ್ ಅಧ್ಯಕ್ಷರಾಗಿ ರಾಜೀವ್ ಕುಮಾರ್ ನೇಮಕ

ಹಣಕಾಸು ಸಚಿವಾಲಯದ ಮಾಜಿ ಕಾರ್ಯದರ್ಶಿ ಮತ್ತು 25ನೇ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ರಾಜೀವ್ ಕುಮಾರ್ ಅವರನ್ನು ಎಚ್‌ಡಿಎಫ್‌ಸಿ ಬ್ಯಾಂಕ್‌ನ ಹೊಸ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಮುಂಬೈ: ಹಣಕಾಸು ಸಚಿವಾಲಯದ ಮಾಜಿ ಕಾರ್ಯದರ್ಶಿ ಮತ್ತು 25ನೇ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ರಾಜೀವ್ ಕುಮಾರ್ ಅವರನ್ನು ಎಚ್‌ಡಿಎಫ್‌ಸಿ ಬ್ಯಾಂಕ್‌ನ ಹೊಸ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇಂದಿನಿಂದಲೇ (ಮಂಗಳವಾರ) ಜಾರಿಗೆ ಬರುವಂತೆ ನಾಲ್ಕು ವರ್ಷಗಳ ಅವಧಿಗೆ ರಾಜೀವ್ ಕುಮಾರ್ ಅವರನ್ನು ಬ್ಯಾಂಕ್‌ನ ಸ್ವತಂತ್ರ ನಿರ್ದೇಶಕರನ್ನಾಗಿ ನೇಮಿಸಲು ಮಂಡಳಿಯು ಅನುಮೋದನೆ ನೀಡಿದೆ ಎಂದು ಎಚ್‌ಡಿಎಫ್‌ಸಿ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್‌ನ ಅಧ್ಯಕ್ಷರಾಗಿದ್ದ ಅತನು ಚಕ್ರವರ್ತಿ ಅವರು ಮಾರ್ಚ್‌ನಲ್ಲಿ ದಿಢೀರನೆ ರಾಜೀನಾಮೆ ನೀಡಿದ್ದರು. ಚಕ್ರವರ್ತಿ ಸ್ಥಾನಕ್ಕೆ ರಾಜೀವ್ ಕುಮಾರ್ ನಿಯೋಜನೆಗೊಂಡಿದ್ದಾರೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ಅನುಮೋದನೆಗೆ ಒಳಪಟ್ಟು, ರಾಜೀವ್ ಕುಮಾರ್ ಅವರನ್ನು ಮೂರು ವರ್ಷಗಳ ಅವಧಿಗೆ ಬ್ಯಾಂಕ್‌ನ ಅರೆಕಾಲಿಕ ಅಧ್ಯಕ್ಷರನ್ನಾಗಿ ನೇಮಿಸಲು ಮತ್ತು ಸಂಭಾವನೆ ನೀಡಲು ಮಂಡಳಿಯು ಒಪ್ಪಿಗೆ ನೀಡಿದೆ. ಕೇಂದ್ರೀಯ ಬ್ಯಾಂಕ್ ಅನುಮೋದಿಸುವ ದಿನಾಂಕದಿಂದ ಈ ನೇಮಕಾತಿ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Back to top button