3 ನೇ ಟಿ20: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 7 ವಿಕೆಟ್ ಗೆಲುವು ಸರಣಿಯಲ್ಲಿ 2-1 ಮುನ್ನಡೆ 

ಬಾಸೆಟೆರೆ: ಭಾರತ 3 ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡಿಸ್ ವಿರುದ್ಧ 7 ವಿಕೆಟ್ ಗಳ ಗೆಲುವು ಸಾಧಿಸಿದ್ದು, 5 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಬಾಸೆಟೆರೆಯಲ್ಲಿ ವಾರ್ನರ್ ಪಾರ್ಕ್ ನಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ 165 ರನ್ ಟಾರ್ಗೆಟ್ ನ್ನು ಭಾರತ ಇನ್ನೂ ಒಂದು ಓವರ್ ಬಾಕಿ ಇರುವಾಗಲೇ ತಲುಪಿ ಗೆಲುವನ್ನು ತನ್ನದಾಗಿಸಿಕೊಂಡಿತು. 
 
44 ಎಸೆತಗಳಲ್ಲಿ 76 ರನ್ ಗಳಿಸಿದ ಸೂರ್ಯಕುಮಾರ್ ಯಾದವ್ ಭಾರತದ ಗೆಲುವಿನಲ್ಲಿ ಮುಖ್ಯಪಾತ್ರ ವಹಿಸಿದರು.ಆರಂಭದಲ್ಲಿ ರೋಹಿತ್ ಶರ್ಮಾ ಅವರ ವಿಕೆಟ್ ಕಳೆದುಕೊಂಡ ಭಾರತ ತಂಡ ಎಡವಿತ್ತು. ಆದರೆ ನಂತರ ಚೇತರಿಸಿಕೊಂಡ ಭಾರತ 3 ವಿಕೆಟ್ ನಷ್ಟಕ್ಕೆ 165 ರನ್ ಗುರಿ ತಲುಪಿ 7 ವಿಕೆಟ್ ಗಳ ಜಯ ಗಳಿಸಿತು.
 
ವೆಸ್ಟ್ ಇಂಡಿಸ್ ಬೌಲಿಂಗ್ ವಿಭಾಗದಲ್ಲಿ ಡೊಮಿನಿಕ್ ಡ್ರೇಕ್ಸ್ ಜೇಸನ್ ಹೋಲ್ಡರ್, ಅಕೇಲ್‌ ಹೊಸೈನ್‌ ತಲಾ ಒಂದು ವಿಕೆಟ್ ಗಳಿಸಿದರು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತದ ಪರ ಹಾರ್ದಿಪ್ ಪಾಂಡ್ಯ, ಆರ್ಶ್ ದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದರು. ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆದರು. 

Latest Indian news

Popular Stories