ಕೊನೆಗೂ ರಾಜ್ಯ ಸರ್ಕಾರದ ಸತತ ಹೋರಾಟದ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ!

ನವದೆಹಲಿ/ಬೆಂಗಳೂರು, ಏಪ್ರಿಲ್​ 27: ಕೇಂದ್ರ ಸರ್ಕಾರ (Union Government) ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ (Karnataka Drought Relief Fund) ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರ ನೀಡಿದೆ.

ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್​ನಲ್ಲಿ ಸೋಮವಾರದೊಳಗೆ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರ್ಕಾರರ ಬರ ಪರಿಹಾರ ಘೋಷಣೆ ಮಾಡಿದೆ.

Latest Indian news

Popular Stories