370 ರದ್ದತಿಯ ನಂತರ ಅಮಿತ್ ಶಾ ಮೊದಲ ಬಾರಿ ಕಾಶ್ಮೀರಕ್ಕೆ ಭೇಟಿ

ಶ್ರೀನಗರ: 2019 ರ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಈ ವೇಳೆ ಹುತಾತ್ಮ ಇನ್ಸ್‌ಪೆಕ್ಟರ್ ಪರ್ವೈಜ್ ಅವರ ಮನೆಗೆ ಭೇಟಿ ನೀಡಿದರು.

ಶನಿವಾರ ಬೆಳಗ್ಗೆ ಕಾಶ್ಮೀರಕ್ಕೆ ಆಗಮಿಸಿದ ಅಮಿತ್ ಶಾ ಇಂದು ಈ ವರ್ಷದ ಆರಂಭದಲ್ಲಿ ಭಯೋತ್ಪಾದಕರಿಂದ ಹತ್ಯೆಯಾದ ಪೊಲೀಸ್ ಅಧಿಕಾರಿ ಇನ್ಸ್‌ಪೆಕ್ಟರ್ ಪರ್ವೈಜ್ ಅವರ ಕುಟುಂಬವನ್ನು ಭೇಟಿ ಮಾಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪರ್ವೈಜ್ ಅಹ್ಮದ್ ಜೂನ್ 22 ರಂದು ಸಂಜೆ ಪ್ರಾರ್ಥನೆ ಸಲ್ಲಿಸಿ ಮನೆಗೆ ಹಿಂದಿರುಗುತ್ತಿದ್ದಾಗ ನೌಗಾಮ್‌ನಲ್ಲಿರುವ ಅವರ ಮನೆಯ ಬಳಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಪರ್ವೈಜ್ ಅಹ್ಮದ್ ಸಾವನ್ನಪ್ಪಿದ್ದರು.

ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಆಗಸ್ಟ್ 5, 2019 ರಂದು ಹಿಂತೆಗೆದುಕೊಂಡ ನಂತರ ಮತ್ತು ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಅಮಿತ್ ಶಾ ಅವರ ಮೊದಲ ಭೇಟಿ ಇದಾಗಿದೆ. ಶಾ ಅವರ ಭೇಟಿಗೆ ಮುನ್ನ ಕಾಶ್ಮೀರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಿಶೇಷವಾಗಿ ನಗರದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಹೆಚ್ಚುವರಿ ಅರೆಸೇನಾ ಪಡೆಗಳ ಐವತ್ತು ಕಂಪನಿಗಳು, ಸುಮಾರು 5,000 ಸೈನಿಕರನ್ನು ಕಣಿವೆಗೆ ಸೇರಿಸಲಾಗುತ್ತಿದೆ. ಸಿಆರ್‌ಪಿಎಫ್ ಪಡೆಗಳ ಬಂಕರ್‌ಗಳು ನಗರದ ಹಲವು ಪ್ರದೇಶಗಳಲ್ಲಿ ಹಾಗೂ ಕಾಶ್ಮೀರ ಕಣಿವೆಯ ಇತರ ಭಾಗಗಳಲ್ಲಿ ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Indian news

Popular Stories

error: Content is protected !!