19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 69.50 ರೂ. ಇಳಿಕೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಜೂನ್ 1 ರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ (Commercial LPG Gas Cylinders) ಬೆಲೆಯನ್ನು 69.50 ರೂ. ಕಡಿತಗೊಳಿಸಿವೆ.

ಇದರೊಂದಿಗೆ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ 1,676 ರಷ್ಟಿದೆ. ದೇಶಾದ್ಯಂತ ಮೆಟ್ರೋ ನಗರಗಳಿಗೂ ಇದು ಅನ್ವಯವಾಗಿದೆ.

ಮುಂಬೈನಲ್ಲಿ ಕೂಡ 69.50 ರೂ. ಇಳಿಕೆಯಾಗಿದ್ದು, ಪರಿಷ್ಕೃತ ಬೆಲೆಯನ್ನು 1,629 ಕ್ಕೆ ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ ಬೆಲೆ 1,841.50 ರಷ್ಟಿದ್ದರೆ, ಕೋಲ್ಕತ್ತಾದಲ್ಲಿ ಬೆಲೆ ಕಡಿತದ ನಂತರ 1,789.50 ರೂ. ಆಗಿದೆ.

ಮಾರ್ಚ್ 1 ರಂದು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು 19 ರೂ. ಇಳಿಕೆಯಾಗಿತ್ತು. ಏಪ್ರಿಲ್‌ನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್ (ಫ್ರೀ ಟ್ರೇಡ್ ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ 30.50 ರೂ. ಮತ್ತು 7.50 ರೂ. ರಷ್ಟು ಕಡಿತಗೊಳಿಸಲಾಗಿತ್ತು. 

ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1 ರಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ.

ಬೆಲೆ ಇಳಿಕೆಯ ಹಿಂದಿನ ನಿಖರವಾದ ಕಾರಣಗಳನ್ನು ಬಹಿರಂಗಪಡಿಸಲಾಗಿಲ್ಲವಾದರೂ, ಅಂತರರಾಷ್ಟ್ರೀಯ ತೈಲ ಬೆಲೆಗಳಲ್ಲಿನ ಬದಲಾವಣೆಗಳು, ತೆರಿಗೆ ನೀತಿಗಳಲ್ಲಿನ ಬದಲಾವಣೆಗಳು ಮತ್ತು ಪೂರೈಕೆ-ಬೇಡಿಕೆ ಯಂತಹ ವಿವಿಧ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಬೆಲೆ ಪರಿಷ್ಕರಿಸಲಾಗುತ್ತದೆ.

Latest Indian news

Popular Stories