ಕಂದಕಕ್ಕೆ ಬಿದ್ದ ಕಾರು | ಒಂದೇ ಕುಟುಂಬದ ನಾಲ್ವರು ಮೃತ್ಯು, ಬದುಕುಳಿದ ಮಗು

ಶ್ರೀನಗರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಕಿಶ್ತ್ವಾರ್ ಉಪ ಆಯುಕ್ತ ದೇವಾಂಶ್ ಯಾದವ್ ‘ಭಂಡಾರ್‌ಕೋಟ್ ಪ್ರದೇಶದಲ್ಲಿ ಚಲಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಬೆಟ್ಟದಿಂದ ಆಳವಾದ ಕಂದಕಕ್ಕೆ ಉರುಳಿ ಬಿದ್ದು ಈ ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ. ಮೃತಪಟ್ಟವರಲ್ಲಿ ಆರೋಗ್ಯ ಇಲಾಖೆಯ ಉದ್ಯೋಗಿ, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ.
ಅಪಘಾತ ಸಂಭವಿಸಿದ ವೇಳೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಅದೃಷ್ಟವಶಾತ್ ಮಗುವೊಂದು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದೆ ಎಂದು ಹೇಳಲಾಗಿದೆ. ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲದೆ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸಂತಾಪ:
ಅಪಘಾತದಲ್ಲಿ ಮೃತಪಟ್ಟವರಿಗೆ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಮುಖ್ಯಸ್ಥ ಗುಲಾಂ ನಬಿ ಆಜಾದ್ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ಚೆನಾಬ್ ಕಣಿವೆಯಲ್ಲಿ “ಹೆಚ್ಚುತ್ತಿರುವ” ಅಪಘಾತಗಳ ಸಂಖ್ಯೆಯನ್ನು ಪರಿಹರಿಸಲು ಸರ್ಕಾರದ ಮಧ್ಯಸ್ಥಿಕೆ ವಹಿಸಬೇಕೆಂದು ಮನವಿ ಮಾಡಿದ್ದಾರೆ.

Latest Indian news

Popular Stories