ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಲಾಗಿದೆ | ದೇವರಾಜೇಗೌಡ ಆರೋಪಕ್ಕೆ ಡಿಕೆಶಿ ಸ್ಪಷ್ಟನೆ

ಬೆಂಗಳೂರು, (ಮೇ. 06): ಹಾಸನ(Hassan) ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಅದರಲ್ಲೂ ಮುಖ್ಯವಾಗಿ ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್(DK Shivakumar) ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ (devarajegowda) ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

ಇದರ ಬೆನ್ನಲ್ಲೇ ಇದೀಗ ಡಿಕ ಶಿವಕುಮಾರ್ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನನಗೂ, ಪೆನ್‌ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ ಸ್ಪಷ್ಟನೆ ನೀಡಿದ್ದಾರೆ.

ನನಗೂ, ಪೆನ್‌ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ. ಹೀಗಾಗಿ ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಲಾಗಿದೆ, ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ. ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ದೇವರಾಜೇಗೌಡ ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್, ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಡ್ಯಾಮೇಜ್ ಕಂಟ್ರೋಲ್‌ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು. ದೇವರಾಜೇಗೌಡ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.

ಇದೇ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿ ಪೆನ್ ಡ್ರೈವ್ ಇದೆ ಅಂದಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಹೀಗಿರುವಾಗ ನನಗೂ, ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ. ಸದ್ಯ ನಾನು ಬೆಂಗಳೂರಿನಿಂದ ಹೊರಗಿದ್ದು, ಬಂದ ನಂತರ ಈ ಬಗ್ಗೆ ಮಾತಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Latest Indian news

Popular Stories