ಲಕ್ನೋ: ರೈಲು ಹಳಿ ಮೇಲೆ ಸಿಲಿಂಡರ್ ಇರಿಸಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ ಘಟನೆ ಉತ್ತರ ಪ್ರದೇಶದ (Uttarpradesh) ಕಾನ್ಪುರದಲ್ಲಿ (Kanpur) ನಡೆದಿದೆ.
ಭಾನುವಾರ ರಾತ್ರಿ 8:25ರ ವೇಳೆ ಕಾನ್ಪುರದಿಂದ ಭಿವಾನಿಗೆ ಪ್ರಯಾಣಿಸುತ್ತಿದ್ದ ಕಾಳಿಂದಿ ಎಕ್ಸ್‌ಪ್ರೆಸ್ (Kalindi Express) ಹಳಿ ಮೇಲಿದ್ದ ಸಿಲಿಂಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸಿಲಿಂಡರ್ ದೂರಕ್ಕೆ ಚಿಮ್ಮಿದೆ.
ಕಾನ್ಪುರದಿಂದ ಕಾಸ್‌ಗಂಜ್ ಮಾರ್ಗದಲ್ಲಿ ರೈಲು ಚಲಿಸುತ್ತಿತ್ತು. ರ‍್ರಾಜ್‌ಪುರ ಹಾಗೂ ಬಿಲ್ಹೌರ್ ನಿಲ್ದಾಣಗಳ ಮಧ್ಯೆ ಮುಂಡೇರಿ ಕ್ರಾಸಿಂಗ್ ಬಳಿ ಈ ಘಟನೆ ನಡೆದಿದೆ. ಮುಂಡೇರಿ ಕ್ರಾಸಿಂಗ್ ಬಳಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ.
ಗಂಟೆಗೆ 70 ರಿಂದ 80 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ರೈಲು ಹಳಿಯ ಮೇಲಿದ್ದ ಸಿಲಿಂಡರ್‌ಗೆ ಡಿಕ್ಕಿ ಹೊಡೆದಿದೆ. ರೈಲು ಹಳಿಯ ಮೇಲಿದ್ದ ಸಿಲಿಂಡರ್‌ನ್ನು ನೋಡಿ ಚಾಲಕ ರಾಜ್ ಕಿಶೋರ್ ರೈಲಿನ ತುರ್ತು ಬ್ರೇಕ್ ಬಳಸಿ ನಿಲ್ಲಿಸಿದ್ದಾರೆ.