ಆಕಸ್ಮಿಕ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತ್ಯು

ಮಂಜೇಶ್ವರ, ಮಾರ್ಚ್ 22: ವಿದ್ಯುತ್ ತಂತಿ ಸ್ಪರ್ಶಿಸಿ 25 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಮೃತರನ್ನು ಅಂಗಡಿಪದವು ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಬೈಕ್ ವರ್ಕ್ ಶಾಪ್ ನಲ್ಲಿ ಉದ್ಯೋಗಿಯಾಗಿದ್ದರು.  ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

ಆತನ ಕಿರುಚಾಟ ಕೇಳಿ ಸ್ಥಳೀಯರು ಓಡಿ ಬಂದು ಕೇಬಲ್‌ಗಳನ್ನು ಬೇರ್ಪಡಿಸಿ ಪ್ರಜ್ವಲ್‌ನನ್ನು ಉಪ್ಪಳದ ಆಸ್ಪತ್ರೆಗೆ ಸಾಗಿಸಿದರು. ಆದರೆ, ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಮಂಜೇಶ್ವರ ಪೊಲೀಸರು ಪರಿಶೀಲನೆ ನಡೆಸಿದರು.

Latest Indian news

Popular Stories