ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನಸಾಮಾನ್ಯರಿಗೆ ನೆಮ್ಮದಿಯ ಬದುಕು – ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್

ಶ್ರೀ ಸಾಮಾನ್ಯನಿಗೆ ಶಾಂತಿ, ಸಾಮರಸ್ಯದ ಬದುಕು ನೀಡುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯವೆಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಡಿಕೇರಿಯ ಕಾವೇರಿ ಹಾಲ್ ಸಭಾಂಗಣದಲ್ಲಿ ಆಯೋಜಿತ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಹಾಗೂ ಕಾರ್ಯಕರ್ತರಿಗೆ ಬೃಹತ್ ಅಭಿನಂದನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಶಕ್ತಿಮೀರಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ವೇದಿಕೆಯಲ್ಲಿ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ , ಬೆಂಗಳೂರು ಶಾಂತಿನಗರದ ಶಾಸಕ ಎನ್.ಎ.ಹಾರಿಸ್, ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್, ಕೆಪಿಸಿಸಿ ವಕ್ತಾರ ಲಕ್ಷ್ಮಣ್, ಮಾಜಿ ಸಚಿವ ಎಂ.ಸಿ.ನಾಣಯ್ಯ, ಮಾಜಿ ಎಂಎಲ್.ಸಿ ಅರುಣ್ ಮಾಚಯ್ಯ, ಮುಖಂಡರಾದ ಟಿ.ಪಿ.ರಮೇಶ್, ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ, ರಾಜ್ಯ ನಾಯಕರು, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಮುಖಂಡರು ಪಾಲ್ಗೊಳ್ಳಲಿದ್ದು, ಜಿಲ್ಲಾ ಕಾಂಗ್ರೆಸ್ ಪ್ರಮುಖರು, ವಿವಿಧ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ಸಮಿತಿ ಸದಸ್ಯರು, ಪದಾಧಿಕಾರಿಗಳು, ಬೂತ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಉಪಸ್ಥಿತಿ.

Latest Indian news

Popular Stories