Featured StoryNational

ನಿಂತಿದ್ದ ಲಾರಿಗೆ ವ್ಯಾನ್ ಡಿಕ್ಕಿ – ಆರು ಮಂದಿ ಮೃತ್ಯು

ಸೇಲಂ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ವ್ಯಾನೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ಸೇಲಂನಲ್ಲಿ ಬುಧವಾರ ನಸುಕಿನ ಜಾವಾ ಸಂಭವಿಸಿದೆ.

ಮೃತರನ್ನು ಸೆಲ್ವರಾಜ್, ಮಂಜುಳಾ, ಅರುಮುಗಂ, ಪಳನಿಸಾಮಿ, ಪಪ್ಪತಿ ಮತ್ತು ಒಂದು ವರ್ಷದ ಮಗು ಎಂದು ಗುರುತಿಸಲಾಗಿದೆ.

ಈಂಗೂರ್‌ನಿಂದ ಎಂಟು ಸದಸ್ಯರು ವ್ಯಾನ್‌ನಲ್ಲಿ ಪೆರುಂತುರೈ ಕಡೆಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಈ ವೇಳೆ ಹೆದ್ದಾರಿ ಬದಿ ,ನಿಂತಿದ್ದ ಲಾರಿಗೆ ವೇಗವಾಗಿ ಬಂದ ವ್ಯಾನ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಅಪಘಾತದ ಭೀಕರ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಪಘಾತದ ಬಗ್ಗೆ ತನಿಖೆ ನಡೆಸಿದ ಪೊಲೀಸರು ವ್ಯಾನ್ ಚಾಲಕನ ಅತೀಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button