ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ – ಮೂವರು ಮೃತ್ಯು

ಪಿರಿಯಾಪಟ್ಟಣ: ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ತಾಲೂಕಿನ ಕಂಪಲಾಪುರ ಗೇಟ್ ಮೈಸೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ಸುಮಾರು 3 ಗಂಟೆಯ ಸುಮಾರಿಗೆ ಸಂಭವಿಸಿದೆ.

ಪಟ್ಟಣದ ಟ್ಯಾಂಕ್ ಬಡಾವಣೆ ನಿವಾಸಿ ಮುದಾಸೀರ್ (35) ಮುಜಾಯಿದ್ (25) ಅಹಮದ್ ಪಾಷಾ ಅಲಿಯಾಸ್ ಬಾಜಿ(45) ಸಾವನ್ನಪ್ಪಿದ್ದಾರೆ.

ಬೆಳ್ಳಂಬೆಳಗ್ಗೆ ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪಟ್ಟಣದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Latest Indian news

Popular Stories