ಬಸ್ -ಬೈಕ್ ಮುಖಾಮುಖಿ: ಪರೀಕ್ಷೆ ಬರೆಯಲು ಬರುತ್ತಿದ್ದ ವಿದ್ಯಾರ್ಥಿ ಮೃತ್ಯು, ಇನ್ನೋರ್ವ ಗಂಭೀರ

ಮಾಗಡಿ : ಪರೀಕ್ಷೆ ಬರೆಯಲು ತನ್ನ ಗೆಳೆಯನೊಂದಿಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಾಗಡಿ ರಾಮನಗರ ಮುಖ್ಯ ರಸ್ತೆಯ ಜೋಡಗಟ್ಟೆ ಕಾಡಿನ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

ಮೃತ ವಿದ್ಯಾರ್ಥಿ ಮಾಗಡಿಗೆ ಇನ್ನೋರ್ವ ವಿದ್ಯಾರ್ಥಿಯ ಜೊತೆ ಬೈಕ್ ನಲ್ಲಿ ಐಟಿಐ ಪರೀಕ್ಷೆ ಬರೆಯಲು ಬರುತ್ತಿದ್ದ ಎನ್ನಲಾಗಿದೆ ಈ ವೇಳೆ ಎದುರಿನಿಂದ ಬಂದ ಸರಕಾರಿ ಬಸ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟಿದ್ದಾನೆ, ಗಂಭೀರ ಗಾಯಗೊಂಡ ವಿದ್ಯಾರ್ಥಿಯನ್ನು ಮಾಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Latest Indian news

Popular Stories