ನಟ ಚೇತನ್ ಚಂದ್ರ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಮಾರಣಾಂತಿಕ ಹಲ್ಲೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಚೇತನ್ ಚಂದ್ರ ಮೇಲೆ ಅಪರಿಚಿತ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಕಗ್ಗಲಿಪುರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಘಟನೆ ಬಗ್ಗೆ ಸ್ವತಃ ನಟ ಚೇತನ್ ಚಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಕೆಲ ಕಿಡಿಗೇಡಿಗಳು, ಬೈಕ್‍ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಶುರುಮಾಡಿದರು. ಈ ವೇಳೆ ದುಡ್ಡು ಕೇಳಲು ಆರಂಭಿಸಿದರು. ಹಣ ಕೊಡೋದಿಲ್ಲ ಎಂದು ಹೇಳಿದ್ದಕ್ಕೆ ಗಲಾಟೆ ಮಾಡಿದರು. ಬಳಿಕ ಬೈಕ್‌ನಲ್ಲಿ ಚೇಸ್ ಮಾಡಿಕೊಂಡು ಬಂದು ಕಾರಿಗೆ ಬೈಕ್ ಅಡ್ಡಹಾಕಿ, ನನ್ನ ಮುಖಕ್ಕೆ ರಕ್ತ ಬರುವ ಹಾಗೆ ಹೊಡೆದಿದರು ಎಂದು ಹೇಳಿದ್ದಾರೆ.

Latest Indian news

Popular Stories