ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ, ಪವಿತ್ರಾ ಗೌಡ ವಶಕ್ಕೆ ಪಡೆದು ವಿಚಾರಣೆ: ಗೃಹ ಸಚಿವ ಡಾ. ಪರಮೇಶ್ವರ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಬಂಧನವಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಖಚಿತಪಡಿಸಿದ್ದಾರೆ.

 

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸತ್ವ ಅಪಾರ್ಟ್ ಮೆಂಟ್ ಬಳಿಯ ಮೋರಿಯಲ್ಲಿ ಸುಮಾರು 35 ವರ್ಷದ ಯುವಕನ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣದ ಜಾಡು ಹಿಡಿದು ತನಿಖೆ ಮಾಡುತ್ತಾ ಹೋದ ಪೊಲೀಸರಿಗೆ ಇದರಲ್ಲಿ ನಟ ದರ್ಶನ್ ಮತ್ತು ಅವರ ಸಹಚರರ ಕೊಲೆಯ ಕೈವಾಡವಿರುವುದು ಪತ್ತೆಯಾಯಿತು.

ಅದರಂತೆ ಇಂದು ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಹೋದ ಪೊಲೀಸರು ಅಲ್ಲಿ ಬ್ಲೂ ರ್ಯಾಡಿಸನ್ ಹೊಟೇಲ್ ನಲ್ಲಿ ಬೆಳಗಿನ ಜಾವ ಜಿಮ್ ಮಾಡುತ್ತಿದ್ದ ನಟ ದರ್ಶನ್ ಅವರನ್ನು ಅಲ್ಲಿಂದಲೇ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.

ಅವರ ಜೊತೆ ಅವರ 9 ಮಂದಿ ಸಹಚರರನ್ನು ವಶಕ್ಕೆ ಪಡೆದು ಅನ್ನಪೂರ್ಣೇಶ್ವರಿ ನಗರ ಪೊಲೀಸರು ತೀವ್ರ ವಿಚಾರಣೆ ನಡೆಸಿ ಬಂಧಿಸಿದ್ದಾರೆ. ಹತ್ಯೆ ಮಾಡಿರುವ ಆರೋಪಿಗಳು ನೀಡಿರುವ ಹೇಳಿಕೆ ಮೇಲೆ ನಟ ದರ್ಶನ್ ಬಂಧನವಾಗಿದೆ ಎಂದು ಗೃಹ ಸಚಿವರು ಹೇಳಿದರು.

ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಸಭ್ಯವಾಗಿ ಮೆಸೇಜ್ ಕಳುಹಿಸಿದ್ದರಂತೆ. ಹೀಗಾಗಿ, ಕೊಲೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಂದು ರಾಜರಾಜೇಶ್ವರಿ ನಗರ ಪೊಲೀಸರು ಪವಿತ್ರಾ ಗೌಡರನ್ನು ಕರೆಸಿ ವಿಚಾರಣೆ ನಡೆಸಿದಾಗ ಪಿತೂರಿ ನಡೆಸಿದ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ.

 

ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ: ಪ್ರಕರಣದಲ್ಲಿ ಖ್ಯಾತ ನಟ ದರ್ಶನ್ ಬಂಧನವಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಇಂದು ಪವಿತ್ರಾ ಗೌಡರನ್ನು ವಶಕ್ಕೆ ಪಡೆದು ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಜೊತೆ ಅವರ ಅಕ್ಕ ಕೂಡ ಠಾಣೆಗೆ ಆಗಮಿಸಿದ್ದರು.

ಈ ಕೊಲೆ ಪ್ರಕರಣದಲ್ಲಿ​​ ನಟ ದರ್ಶನ್​ ಸೇರಿದಂತೆ 10 ಜನರನ್ನು ವಿಜಯನಗರ ಎಸಿಪಿ ಚಂದನ್​ ತಂಡ ಬಂಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮೈಸೂರಿನ ಱಡಿಸನ್​ ಹೋಟೆಲ್​ನಲ್ಲಿ ದರ್ಶನ್​ ಅರೆಸ್ಟ್ ಮಾಡಲಾಗಿದ್ದು ಅವರ ಜೊತೆ ಪಟ್ಟಣಗೆರೆ ಜಯಣ್ಣ ತಂಗಿ ಪುತ್ರ ವಿನಯ್​, ಕಿರಣ್, ಮಧು, ಲಕ್ಷ್ಮಣ್​, ಆನಂದ್​​, ರಾಘವೇಂದ್ರ ಸೇರಿ 10 ಜನರನ್ನು ಅರೆಸ್ಟ್ ಮಾಡಲಾಗಿದೆ.

 

 

Latest Indian news

Popular Stories