ಪೊಲೀಸ್ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ವಕೀಲರ ಪ್ರತಿಭಟನೆ

ಮಂಗಳೂರು: ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನ್ಯಾಯಾಲಯದ ಆವರಣದಲ್ಲಿ ಸೋಮವಾರ ಮಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಮಾಜಿ ಅಧ್ಯಕ್ಷ ಶಂಭು ಶರ್ಮ ಅವರು ಮಾತನಾಡಿ, ದೌರ್ಜನ್ಯ ಎಸಗಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು. ವಕೀಲರ ರಕ್ಷಣಾ ಕಾಯಿದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಅಧ್ಯಕ್ಷ ಪೃಥ್ವಿರಾಜ್ ರೈ ಅವರು ಮಾತನಾಡಿ ಇದು ಪ್ರಾಥಮಿಕ ಹಂತದ ಹೋರಾಟ. ಇದು ಪೊಲೀಸರಿಗೆ ಎಚ್ಚರಿಕೆ. ಇಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದರು.

ಪ್ರಧಾನ ಕಾರ್ಯದರ್ಶಿ‌ ಶ್ರೀಧರ ಎಣ್ಮಕಜೆ ಮತ್ತಿತರರು ಪಾಲ್ಗೊಂಡಿದ್ದರು.

ವಿರಾಜಪೇಟೆಯಲ್ಲಿ ವಕೀಲರ ಪ್ರತಿಭಟನೆ:

ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಮೇಲಿನ ಹಲ್ಲೆ ಘಟನೆಗೆ ಖಂಡಿಸಿ ವಿರಾಜಪೇಟೆಯಲ್ಲೂ ವಕೀಲರ ಪ್ರತಿಭಟನೆ ನಡೆಯಿತು.

ನ್ಯಾಯಾಲಯ ಕಲಾಪದಿಂದ ಹೊರಗುಳಿದು ವಕೀಲರು ಪ್ರತಿಭಟಿಸಿ ವಕೀಲರ ದಿನಾಚರಣೆ ಸಂದರ್ಭ ಸರಕಾರ ವಕೀಲರ ರಕ್ಷಣಾ ಕಾಯ್ದೆ ಜಾರಿಗೊಳಿಸುವಂತೆ ವಿರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಅಪ್ಪಣ್ಣ ಆಗ್ರಹಿಸಿದರು.

IMG 20231204 WA0023 Featured Story, Dakshina Kannada

Latest Indian news

Popular Stories