ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿವೆ. ಈಗಾಗಲೇ, ಪಂಜಾಬ್‌ನ ಜಲಂಧರ್‌ನಲ್ಲಿ ಎಎಪಿ ಗೆದ್ದಿದ್ದು, ಹಿಮಾಚಲ ಪ್ರದೇಶದ ಡೆಹ್ರಾ ಕ್ಷೇತ್ರದಲ್ಲಿ ಅಲ್ಲಿನ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಗೆಲುವು ಸಾಧಿಸಿದ್ದಾರೆ. ಇದೀಗ, ಉತ್ತರಾಖಂಡದ ಬದ್ರಿನಾಥ್ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಬದ್ರಿನಾಥದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಲಖಪತ್ ಸಿಂಗ್ ಬುಟೋಲಾ ಅವರು 3.5 ಸಾವಿರ ಮತಗಳಿಂದ ಗೆದ್ದಿದ್ದಾರೆ.
ಹಿಂದುಗಳ ಪುಣ್ಯ ಕ್ಷೇತ್ರಗಳೆಂದು ಪರಿಗಣಿಸಲಾದ ಬದ್ರಿನಾಥ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವನ್ನು, ಹಿಂದುತ್ವದ ವಿರುದ್ಧದ ವಿಜಯವೆಂದು ಹಲವರು ಬಣ್ಣಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿಯೇ ಸೋತಿದ್ದ, ಬಿಜೆಪಿ ಈಗ ಬದ್ರಿನಾಥದಲ್ಲೂ ಸೋಲುಂಡಿದೆ. ಜನರು ಬಿಜೆಪಿ ಕೋಮುವಾದ ರಾಜಕೀಯವನ್ನು ತಿರಸ್ಕರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.