ಕೇಜ್ರಿವಾಲ್ ಬಂಧನದ ವಿಷಯದ ಬಳಿಕ ಕಾಂಗ್ರೆಸ್ ಬ್ಯಾಂಕ್ ಖಾತೆ ಸ್ಥಗಿತದ ಬಗ್ಗೆ ಮಾತನಾಡಿದ ಅಮೇರಿಕಾ

ವಾಷಿಂಗ್ ಟನ್: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನಕ್ಕೊಳಗಾಗಿರುವ ವಿಷಯದ ಬಗ್ಗೆ ಮಾತನಾಡಿದ್ದ ಅಮೇರಿಕಾ ಈಗ ಕಾಂಗ್ರೆಸ್ ನ ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿರುವುದರ ಬಗ್ಗೆಯೂ ಪ್ರತಿಕ್ರಿಯೆ ನೀಡಿದೆ.

ಕೇಜ್ರಿವಾಲ್ ಪ್ರಕರಣದಲ್ಲಿ ಮಾತನಾಡಿದ್ದ ಅಮೇರಿಕಾದ ರಾಯಭಾರ ಕಚೇರಿ ಅಧಿಕಾರಿಗೆ ಭಾರತ ಸಮನ್ಸ್ ಕಳಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೇರಿಕಾ ವಕ್ತಾರ ಮ್ಯಾಥ್ಯೂ ಮಿಲ್ಲರ್, ಕಾಂಗ್ರೆಸ್ ಪಕ್ಷದ ಆರೋಪಗಳ ಕುರಿತು ನಮಗೆ ಅರಿವಿದೆ ಎಂದಷ್ಟೇ ಹೇಳಿದ್ದಾರೆ.

ಈ ಪ್ರತಿಯೊಂದು ಸಮಸ್ಯೆಗಳಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ನಾವು ಪ್ರೋತ್ಸಾಹಿಸುತ್ತೇವೆ, ”ಎಂದು ಅಮೇರಿಕಾ ಹೇಳಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಅಮೆರಿಕಾ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ ಅವರಿಗೆ ವಿದೇಶಾಂಗ ಸಚಿವಾಲಯ ಸಮನ್ಸ್‌ ನೀಡಿತ್ತು. ಅಮೆರಿಕಾ ರಾಯಭಾರ ಕಚೇರಿಯ ಹಂಗಾಮಿ ಉಪಮುಖ್ಯಸ್ಥರು ಇಂದು ಸೌತ್‌ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಭೇಟಿ ನೀಡಿದ್ದರು. ಆದರೆ ಈ ಭೇಟಿ ವೇಳೆ ನಡೆದ ಮಾತುಕತೆಗಳ ವಿವರಗಳು ಬಹಿರಂಗಪಡಿಸಲಾಗಿಲ್ಲ.

Latest Indian news

Popular Stories