ವಾರದಲ್ಲಿ ನಾಲ್ಕು ದಿನ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಮೊಟ್ಟೆ ಪೊರೈಸಲು ಅಜೀಂ ಪ್ರೇಂಜಿ ಫೌಂಡೇಶನ್ ಜೊತೆ ಒಪ್ಪಂದ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ 20: ಅಜೀಂ ಪ್ರೇಮ್ ಜಿ ಪ್ರತಿಷ್ಠನದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ವಾರದ ನಾಲ್ಕು ದಿನಗಳು ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ಸರಬರಾಜು ಮಾಡಲು ಒಪ್ಪಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಚಾರ ತಿಳಿಸಿದರು.

ಈ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿದ್ದು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ಅಗತ್ಯ ಎಂದು ಸಿದ್ದರಾಮಯ್ಯ ಹೇಳಿದರು.

ನಾಳೆ ಅಂಕೋಲಾಕ್ಕೆ ಭೇಟಿ:

ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಬೇಕೆಂದು ಸೂಚಿಸಲಾಗಿದೆ ಎಂದ ಮುಖ್ಯಮಂತ್ರಿಗಳು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇತುವೆ ಪರಿಶೀಲಿಸಲು ನಾಳೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Latest Indian news

Popular Stories